ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ 12 ಎಫ್‌ಐಆರ್ ದಾಖಲು

Prasthutha|

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಬಿಬಿಎಂಪಿ 12 ಎಫ್‌ಐಆರ್ ದಾಖಲಿಸಿದೆ.

- Advertisement -

ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದಂತೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿರುತ್ತಾರೆ.

ಈ ತಿಂಗಳ ಆರಂಭದಿಂದ ಇದುವರೆಗೆ 1259 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 27 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 12 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ.

- Advertisement -

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರೀಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.

Join Whatsapp
Exit mobile version