ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆ: ಕಾಂಗ್ರೆಸ್‌ ಕಾರ್ಯಕರ್ತರ ವಿರುದ್ಧವೇ 12 ಎಫ್‌ಐಆರ್‌, 12 ಲಕ್ಷ ದಂಡ

- Advertisement -

- Advertisement -

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರು ಕ್ರಮಕೈಗೊಂಡಿದ್ದಾರೆ.

ಬಳ್ಳಾರಿ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಪಶ್ಚಿಮ, ಪೂರ್ವ ಹಾಗೂ ಯಲಹಂಕ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಪರಿಶೀಲಿಸಿ ತೆರವು ಕಾರ್ಯಾಚರಣೆ ನಡೆಸಿದರು.

- Advertisement -

ನಗರದ ಪೂರ್ವ, ಪಶ್ಚಿಮ ಹಾಗೂ ಯಲಹಂಕ ಸೇರಿದಂತೆ ಮೂರೂ ವಲಯಗಳ ಅನಧಿಕೃತ ಫ್ಲೆಕ್ಸ್ ತೆರವು ಮಾಡಲಾಗಿದೆ. ನಿನ್ನೆಯಿಂದ 1,350 ಕ್ಕೂ ಹೆಚ್ಚು ಫ್ಲೆಕ್ಸ್, ಬ್ಯಾನರ್‌ಗಳು ಹಾಗೂ 600 ಕ್ಕೂ ಹೆಚ್ಚು ಪಕ್ಷದ ಧ್ವಜಗಳನ್ನು ತೆಗೆಯಲಾಗಿದೆ.

ಅರಮನೆ ಮೈದಾನದಲ್ಲಿ ನಡೆದ ಯುವಸಂಕಲ್ಪ ಕಾರ್ಯಕ್ರಮದಲ್ಲಿ ಪದಗ್ರಹಣ ಸ್ವೀಕರಿಸಿದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರಿಗೂ 1 ಲಕ್ಷ ರೂ. ದಂಡ ವಿಧಿಸಲಾಗಿದೆ. ಕಾರ್ಯಕ್ರಮಕ್ಕೆ ಶುಭಾಶಯ ಕೋರಿದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಾಲಾ ಪ್ರದೀಪ್‌, ಮಾಜಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದರ್ಶನ್ ಸುಧಾಕರ್, ಬೆಂಗಳೂರು ಕೇಂದ್ರ ಯುವ ಕಾಂಗ್ರೆಸ್ ಅಧ್ಯಕ್ಷ ರಂಜಿತ್ ಕುಮಾರ್‌, ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಚೈತ್ರಾ ಗಿರೀಶ್‌, ಬೆಂಗಳೂರು ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದರ್ಶನ್ ದಿವಾಕರ್, INTUC ರಾಜ್ಯ ಸಂಘಟನೆ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಗೆ ತಲಾ 1 ಲಕ್ಷ ರೂ. ಹಾಗೂ ತೆರವುಗೊಳಿಸುವ ಚಾರ್ಜ್ 5,000 ರೂ. ದಂಡ ಹಾಕಲಾಗಿದೆ.

- Advertisement -


Must Read

Related Articles