ಗುಜರಾತ್: ಉಪ್ಪು ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಸಾವು

Prasthutha|

ಸೂರತ್: ಗುಜರಾತಿನ ಮೊರ್ಬಿ ಜಿಲ್ಲೆಯಲ್ಲಿ ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಹಲ್ವಾಡ್ ಕೈಗಾರಿಕಾ ಪ್ರದೇಶದ ಸಾಗರ್ ಸಾಲ್ಟ್ ಕಾರ್ಖಾನೆಯಲ್ಲಿ ಈ ದುರಂತ ಘಟನೆ ನಡೆದಿದೆ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಸಚಿವ ಬ್ರಿಜೇಶ್ ಮೆರ್ಜಾ ತಿಳಿಸಿದ್ದಾರೆ.

ಸದ್ಯ ಅವಶೇಷಗಳಡಿಯಲ್ಲಿ ಸಿಲುಕಿರುವ ಇತರರನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp