Home ಟಾಪ್ ಸುದ್ದಿಗಳು ಗುಜರಾತ್: ಉಪ್ಪು ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಸಾವು

ಗುಜರಾತ್: ಉಪ್ಪು ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಸಾವು

ಸೂರತ್: ಗುಜರಾತಿನ ಮೊರ್ಬಿ ಜಿಲ್ಲೆಯಲ್ಲಿ ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲ್ವಾಡ್ ಕೈಗಾರಿಕಾ ಪ್ರದೇಶದ ಸಾಗರ್ ಸಾಲ್ಟ್ ಕಾರ್ಖಾನೆಯಲ್ಲಿ ಈ ದುರಂತ ಘಟನೆ ನಡೆದಿದೆ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಸಚಿವ ಬ್ರಿಜೇಶ್ ಮೆರ್ಜಾ ತಿಳಿಸಿದ್ದಾರೆ.

ಸದ್ಯ ಅವಶೇಷಗಳಡಿಯಲ್ಲಿ ಸಿಲುಕಿರುವ ಇತರರನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version