ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಉಂಟಾದ ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಲು ಅಪಾರ ಸಂಖ್ಯೆಯ ಭಕ್ತರು ವೈಷ್ಣೋದೇವಿ ದೇಗುಲ ಪ್ರವೇಶಿಸಿದಾಗ ನೂಕುನುಗ್ಗಲು ಉಂಟಾಯಿತು ಎನ್ನಲಾಗಿದೆ.
“ದೇಗುಲದಲ್ಲಿ ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಉಂಟಾದ ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.
ಸಂತ್ರಸ್ತ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳನ್ನು, ಗಾಯಾಳುಗಳಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.