Home ಟಾಪ್ ಸುದ್ದಿಗಳು 125 ಸರ್ಕಾರಿ ಶಾಲೆ ಸ್ಮಾರ್ಟ್ ಕ್ಲಾಸ್ ರೂಮ್ ಗಳಾಗಿ ಪರಿವರ್ತನೆ: ಸಚಿವ ನಾಗೇಶ್

125 ಸರ್ಕಾರಿ ಶಾಲೆ ಸ್ಮಾರ್ಟ್ ಕ್ಲಾಸ್ ರೂಮ್ ಗಳಾಗಿ ಪರಿವರ್ತನೆ: ಸಚಿವ ನಾಗೇಶ್

ಬೆಂಗಳೂರು: ರಾಜ್ಯದಲ್ಲಿ 125 ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಕ್ಲಾಸ್ ರೂಮ್ ಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.


ನಗರದ ಅಗರದ ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಸಂಸ್ಥೆಗಳ ನೆರವಿನಿಂದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಸಾಕ್ಷರತೆ ಉತ್ತೇಜಿಸಲು ಸರ್ಕಾರ ಸ್ಮಾರ್ಟ್ ಕ್ಲಾಸ್‌ಗಳಿಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದು ಹೇಳಿದರು.


ಶಿಕ್ಷಣವು ಮೌಲ್ಯಾಧಾರಿತ ಮತ್ತು ಸಮಗ್ರವಾಗಿರಬೇಕು, ಇದು ಶೈಕ್ಷಣಿಕ ಸಾಧನೆಯನ್ನು ಹೆಚ್ಚಿಸುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಕೌಶಲ್ಯತೆಯನ್ನು ವೃದ್ಧಿಸಲು ನೆರವಾಗಲಿದೆ, ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ವಿಶೇಷ ಬೋಧನಾ ಕ್ರಮವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Join Whatsapp
Exit mobile version