ಮಂಗಳೂರು ವಿಮಾನ ನಿಲ್ದಾಣದಲ್ಲಿ 13.2 ಲಕ್ಷ ರೂ. ಮೌಲ್ಯದ ಚಿನ್ನ ವಶ

Prasthutha|

ಮಂಗಳೂರು : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಕಸ್ಟಮ್ ಅಧಿಕಾರಿಗಳು ಪತ್ತೆ ಹಚ್ಚಿ ಚಿನ್ನ ವಶಪಡಿಸಿಕೊಂಡ್ಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಿದ್ದಿಕ್ ಮಿಕ್ದಿಮ್ ಹುಸೈನ್ ಎಂಬಾತ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕ. ಈತ ದುಬೈನಿಂದ ಇಂದು ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ಈತನ ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನಿಂದ 24 ಕ್ಯಾರೆಟ್ ಪರಿಶುದ್ಧತೆಯ 262 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ. 13,17,860 ಎಂದು ಅಂದಾಜಿಸಲಾಗಿದೆ.ಚಿನ್ನವನ್ನು ವಶಕ್ಕೆ ಪಡೆದುಕೊಂಡ ಮಂಗಳೂರು ವಿಮಾನ‌ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಪ್ರಯಾಣಿಕ ಹುಸೈನ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

- Advertisement -