ದೆಹಲಿ: ಕಳೆದ ಎರಡು ದಿನಗಳ ಹಿಂದಷ್ಟೇ ಐಎಎಸ್ ತರಬೇತಿ ಕೇಂದ್ರದೊಳಗೆ ನೀರು ನುಗ್ಗಿ ಮೂವರು ಐಎಎಸ್ ಆಕ್ಷಾಂಕ್ಷಿಗಳು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಎಲ್ಲಾ ಅಕ್ರಮ ತರಬೇತಿ ಕೇಂದ್ರಗಳ ಮೇಲೆ ಕಣ್ಣಿಟ್ಟಿದ್ದು, ಈಗಾಗಲೇ 13 ಕೇಂದ್ರಗಳಿಗೆ ಬೀಗ ಹಾಕಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾವು ಅವರ ಐಎಎಸ್ ಸ್ಟಡಿ ಸರ್ಕಲ್ ನ ನೆಲಮಾಳಿಗೆಯಲ್ಲಿ ಇದ್ದಕ್ಕಿದ್ದಂತೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳಾದ ತಾನಿಯಾ ಸೋನಿ, ಶ್ರೇಯಾ ಯಾದವ್ ಮತ್ತು ನವೀನ್ ಡೆಲ್ವಿನ್ ಸಾವನ್ನಪ್ಪಿದ್ದಾರೆ.
ಸೀಲ್ ಮಾಡಲಾದ ಕೋಚಿಂಗ್ ಸೆಂಟರ್ ಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಸೇರಿದೆ.
ಈ ಕೋಚಿಂಗ್ ಸೆಂಟರ್ ಗಳು ನಿಯಮಗಳನ್ನು ಉಲ್ಲಂಘಿಸಿ ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ ಮತ್ತು ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಲಾಗಿದೆ ಮತ್ತು ನೋಟಿಸ್ ಗಳನ್ನು ಅಂಟಿಸಲಾಗಿದೆ ಎಂದು ಎಂಸಿಡಿ ಮೇಯರ್ ಶೈಲಿ ಒಬೆರಾಯ್ ಆದೇಶದಲ್ಲಿ ತಿಳಿಸಿದ್ದಾರೆ.