13 ಲಕ್ಷ ಅಕ್ರಮ ಪಡಿತರ ಚೀಟಿ ರದ್ದು: ಉಮೇಶ್ ಕತ್ತಿ

Prasthutha|

ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅಕ್ರಮ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

- Advertisement -


ಚಾಮರಾಜನಗರ ಜಿಲ್ಲೆಯ ಬಂಡಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಂದ ದಂಡ ವಸೂಲಿ ಮಾಡಲಾಗಿದೆ. ಹೊಸದಾಗಿ ಪಡಿತರ ಚೀಟಿಗಾಗಿ 4 ಲಕ್ಷ ಅರ್ಜಿ ಬಂದಿದ್ದು, ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಮಲೆಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಲು ರಾಜ್ಯ ಸಿದ್ಧತೆ ಮಾಡಿಕೊಂಡಿದ್ದು, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ 600 ಕಿಲೋಮೀಟರ್ ರೈಲ್ವೆ ಹಳಿ ಬೇಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

Join Whatsapp