ಮುಂಬೈಯಲ್ಲಿ ಮೇಲ್ಸೇತುವೆ ಕುಸಿತ: ಹಲವು ಕಾರ್ಮಿಕರಿಗೆ ಗಂಭೀರ ಗಾಯ

Prasthutha|

ಮುಂಬೈ: ಅಘಾತಕಾರಿ ಘಟನೆಯೊಂದರಲ್ಲಿ ಇಂದು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಉಪನಗರದ ಎಂ.ಟಿ.ಎನ್.ಎಲ್ ಜಂಕ್ಷನ್ ನಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು ಬಿದ್ದಿದೆ. ಪರಿಣಾಮ 14 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೇಲ್ಸೇತುವೆ ಕುಸಿತದಿಂದ ಗಾಯಗೊಂಡ ಕಾರ್ಮಿಕರನ್ನು ತಕ್ಷಣ ವಿ.ಎನ್. ದೇಸಾಯಿ ಆಸ್ಪತ್ರೆಗೆ ಸಾಗಿಸಲಾಗಿದೆ. ಶುಕ್ರವಾರ ಮುಂಜಾನೆ 4 ಗಂಟೆ ಹೊತ್ತಿಗೆ ಈ ದುರ್ಷಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -