November 20, 2020

ಮದುವೆಯಿಂದ ಹಿಂದಿರುಗುತ್ತಿದ್ದ ವಾಹನ ನಿಂತಿದ್ದ ಟ್ರಕ್ ಗೆ ಢಿಕ್ಕಿ | 14 ಮಂದಿಯ ಭೀಕರ ದುರ್ಮರಣ

ಪ್ರತಾಪಗಢ : ಮದುವೆ ಕಾರ್ಯವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವಾಹನವೊಂದು ನಿಂತಿದ್ದ ಟ್ರಕ್ ಒಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಮಕ್ಕಳೂ ಸೇರಿ 14 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರಯಾಗ್ ರಾಜ್-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೆರೊ ವಾಹನ ಒಂದು ಟ್ರಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಬೊಲೆರೊದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ 11.45ರ ಸುಮಾರಿಗೆ ಮಾಣಿಕಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೇಶರಾಜ್ ಇನಾರಾ ಗ್ರಾಮದ ಸಮೀಪ ಮಹೀಂದ್ರಾ ಬೊಲೆರೊ ವಾಹನ ಮತ್ತು ನಿಲ್ಲಿಸಿದ್ದ ಟ್ರಕ್ ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೊಲೆರೊದ ಮುಂಭಾಗದಲ್ಲಿದ್ದ ಪ್ರಯಾಣಿಕರು ಹಿಂಬದಿಯಿಂದ ಹೊರಗೆ ಬಿದ್ದಿದ್ದಾರೆ.

ಟೈರ್ ಪಂಕ್ಚರ್ ಆಗಿದ್ದ ಕಾರಣ ದಾರಿಯ ಬದಿಯಲ್ಲಿ ಟ್ರಕ್ ಅನ್ನು ನಿಲ್ಲಿಸಲಾಗಿತ್ತು. ವೇಗವಾಗಿ ಬಂದ ಬೊಲೆರೊ ವಾಹನ ನಿಂತಿದ್ದ ಟ್ರಕ್‌ ಗೆ ಹಿಂದಿನಿಂದ ಗುದ್ದಿದೆ. ವಾಹನದ ಅರ್ಧದಷ್ಟು ಭಾಗ ಟ್ರಕ್ ಅಡಿ ಸಿಲುಕಿ ನಜ್ಜುಗುಜ್ಜಾಗಿದೆ. ಬಳಿಕ ಅದನ್ನು ಪೊಲೀಸರು ಹೊರ ತೆಗೆದಿದ್ದಾರೆ ಎಂದು ಪ್ರತಾಪಗಢ ಎಸ್‌ಪಿ ಅನುರಾಗ್ ಆರ್ಯ ತಿಳಿಸಿದ್ದಾರೆ.

ಮದುವೆ ಸಮಾರಂಭವೊಂದಲ್ಲಿ ಪಾಲ್ಗೊಂಡಿದ್ದ ದುರ್ದೈವಿಗಳು ಗೊಂಡಾದಲ್ಲಿನ ತಮ್ಮ ಹಳ್ಳಿಗೆ ವಾಪಸಾಗುತ್ತಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!