ಬೀದರ್: ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥ

Prasthutha|

ಬೀದರ್: ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಆಗಾಗ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಂತಹ ಪ್ರಕರಣಗಳು ವರದಿಯಾಗುತ್ತಿರುತ್ತವೆ.

- Advertisement -

ಆದರೂ ಕೂಡ ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ನೀಡದೆ ಇರುವುದು ಬೇಸರದ ಸಂಗತಿ. ಇದೀಗ ಮತ್ತೆ ಬೀದರ್ ತಾಲೂಕಿನ ಬರೀದಾಬಾದ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥಗೊಂಡಿದ್ದಾರೆ.

ಸದ್ಯ ಅಸ್ವಸ್ಥರನ್ನು ಬ್ರೀಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಒಂದೇ ದಿನ ಆರು ಜನ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರು. ಸದ್ಯ ಬರೀದಾಬಾದ್ ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದಾರೆ.

Join Whatsapp