Home ಟಾಪ್ ಸುದ್ದಿಗಳು ಮಂಗಳೂರು ವಿಮಾನ ದುರಂತಕ್ಕೆ 14 ವರ್ಷ: ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ದಾಂಜಲಿ

ಮಂಗಳೂರು ವಿಮಾನ ದುರಂತಕ್ಕೆ 14 ವರ್ಷ: ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ದಾಂಜಲಿ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ 14 ವರ್ಷ ಸಂದಿವೆ. ಈ ದುರಂತದಲ್ಲಿ ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ನಿರ್ಮಿಸಲಾದ ಪಾರ್ಕ್ ನಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು.


ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪೊಲೀಸ್ ಅಧಿಕಾರಿಗಳು, ವಿಮಾನ ನಿಲ್ದಾಣದ ಅಧಿಕಾರಿಗಳು ಸೇರಿದಂತೆ ಮಡಿದವರ ಕುಟುಂಬಸ್ಥರು ಭಾಗವಹಿಸಿದರು.

2010ರ ಮೇ 22ರ ಬೆಳಗ್ಗೆ 6.20ಕ್ಕೆ ದುಬಾೖಯಿಂದ ಆಗಮಿಸಿದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಮಂಗಳೂರು ವಿಮಾನ ನಿಲ್ದಾಣದ ಸಮೀಪದ ಕೆಂಜಾರಿನಲ್ಲಿ ಅಪಘಾತಕ್ಕೀಡಾಗಿತ್ತು.

ವಿಮಾನ ಲ್ಯಾಂಡ್‌ ಆಗುವ ವೇಳೆ ರನ್‌ವೇಯಲ್ಲಿ ನಿಲ್ಲದೆ ಸೂಚನಾ ಗೋಪುರದ ಕಂಬಗಳಿಗೆ ಢಿಕ್ಕಿ ಹೊಡೆದು ವಿದ್ಯುತ್‌ ತಂತಿಗಳಿಗೆ ಬಡಿಯುತ್ತಾ ಬಳಿಕ ಕೆಂಜಾರಿನಲ್ಲಿ ಕೆಳಕ್ಕೆ ಉರುಳಿ ಸ್ಫೋಟಗೊಂಡಿತ್ತು. ಇದಕ್ಕೂ ಮೊದಲು ಮರಕ್ಕೆ ಬಡಿದು ವಿಮಾನದ ಬಾಗಿಲು ತೆರೆದುಕೊಂಡಾಗ 8 ಮಂದಿ ಹೊರಗೆ ಎಸೆಯಲ್ಪಟ್ಟಿದ್ದರು. ಓರ್ವ ಯುವತಿ ಮರಗಳ ರೆಂಬೆಗಳಲ್ಲಿ ಸಿಲುಕಿಕೊಂಡಿದ್ದಳು. ವಿಮಾನದಲ್ಲಿದ್ದ 166 ಮಂದಿ ಪ್ರಯಾಣಿಕರಲ್ಲಿ ಎಲ್ಲ 8 ಸಿಬಂದಿ ಸಹಿತ 158 ಮಂದಿ ಸಜೀವ ದಹನಗೊಂಡಿದ್ದರು.

Join Whatsapp
Exit mobile version