ನಾಳೆಯಿಂದ ಪ್ರೌಢಶಾಲೆ ಆರಂಭ: ಉಡುಪಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

Prasthutha|

ಉಡುಪಿ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ನಾಳೆಯಿಂದ ಪ್ರೌಢಶಾಲೆ ಆರಂಭವಾಗಲಿದ್ದು, ಉಡುಪಿ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.

- Advertisement -

ಫೆಬ್ರವರಿ 12ರಿಂದ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆಗೆ ಅವಕಾಶ ಇಲ್ಲ. ಯಾವುದೇ ವ್ಯಕ್ತಿ ಜಾತಿ ಧರ್ಮಕ್ಕೆ ನೈತಿಕತೆ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶಿಸಲಾಗಿದೆ.



Join Whatsapp