15 ವರ್ಷದ ಬಾಲಕನಿಂದ ಹೈಸ್ಕೂಲ್ ನಲ್ಲಿ ಗುಂಡಿನ ದಾಳಿ | ಮೂವರು ವಿದ್ಯಾರ್ಥಿಗಳು ಮೃತ್ಯು

Prasthutha: December 1, 2021

ಅಮೆರಿಕ : 15ವರ್ಷದ ಬಾಲಕನೊಬ್ಬಇಲ್ಲಿನ ಮಿಚಿಗನ್ನಲ್ಲಿರುವ ಆಕ್ಸ್ಫರ್ಡ್ ಹೈಸ್ಕೂಲ್​​ ನಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಲ್ಲದೇ ಗುಂಡಿನ ದಾಳಿಯಲ್ಲಿ ಶಿಕ್ಷಕರೂ ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳಲ್ಲಿ ಇಬ್ಬರು ಬಾಲಕರು ಮತ್ತು ಓರ್ವ ಬಾಲಕಿ ಸೇರಿದ್ದಾಳೆ ಎಂದು ಓಕ್ಲ್ಯಾಂಡ್ ಕೌಂಟಿ ಉಪ ಕಾನೂನು ಮತ್ತು ಸುವ್ಯವಸ್ಥೆ ಅಧಿಕಾರಿ ಮೈಕೆಲ್ ಜಿ ಮೆಕ್‌ಕೇಬ್ ಮಾಹಿತಿ ನೀಡಿದ್ದಾರೆ.

ಗಾಯಗೊಂಡ 8 ಮಂದಿಯಲ್ಲಿ ಆರು ಮಂದಿ ಸ್ಥಿತಿ ಸ್ಥಿರವಾಗಿದ್ದು, ಇನ್ನಿಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ. ಶಾಲೆಯಲ್ಲಿ 15-20 ಬಾರಿ ಗುಂಡು ಹಾರಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಸ್ಕೂಲ್​​ ನಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅವರು ಮಾಧ್ಯಮ ವರದಿಗಾರರಿಗೆ ತಿಳಿಸಿದ್ದಾರೆ.

ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ್ದು ಒಬ್ಬನೇ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದೂ ಮೆಕ್ಕೇಬ್ ಹೇಳಿದ್ದಾರೆ. ಗುಂಡಿನ ದಾಳಿ ನಡೆಯುತ್ತಿದ್ದಂತೆ ಶೀಘ್ರವೇ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರನ್ನು ಸಮೀಪದ ದೊಡ್ಡ ಸ್ಟೋರ್ವೊಂದಕ್ಕೆ ಸ್ಥಳಾಂತರ ಮಾಡಲಾಯಿತು ಎಂದು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!