ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ದಲಿತ ಬಾಲಕಿಯ ಅತ್ಯಾಚಾರ | ಕೇಸ್ ಹಿಂಪಡೆಯಲು ಕಿರುಕುಳ | ಬೆಂಕಿ ಹಚ್ಚಿ ಹತ್ಯೆಗೈದ ದುಷ್ಟರು

Prasthutha: November 18, 2020

ಬುಲಂದ್ ಶಹರ್ : ಉತ್ತರ ಪ್ರದೇಶದಲ್ಲಿ ಮತ್ತೊಂದು ದಲಿತ ಬಾಲಕಿಯ ಅತ್ಯಾಚಾರ, ಹತ್ಯೆ ನಡೆದಿದೆ. ಬುಲಂದ್ ಶಹರ್ ನ 15 ವರ್ಷದ ಬಾಲಕಿಯೊಬ್ಬಳ ಮೇಲೆ 3 ತಿಂಗಳ ಹಿಂದೆ ಅತ್ಯಾಚಾರ ನಡೆದಿತ್ತು. ಆರೋಪಿ ಬಂಧಿತನೂ ಆಗಿದ್ದ, ಬಂಧಿತನ ಸಂಬಂಧಿಕರು ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದರು, ಅಲ್ಲದೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೀಗ ಆರೋಪಿಯ ಏಳು ಮಂದಿ ಸಂಬಂಧಿಕರು ಬಾಲಕಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಏಳು ಮಂದಿ ದುಷ್ಕರ್ಮಿಗಳು ಬಾಲಕಿಯ ಮನೆಯೊಳಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಯು ಆಸ್ಪತ್ರೆಯಲ್ಲಿ ಆರೋಪಿಗಳ ಬಗ್ಗೆ ಮಾತನಾಡುತ್ತಿರುವ ವೀಡಿಯೊ ಬಹಿರಂಗವಾಗಿದೆ.

ಆಗಸ್ಟ್ ನಲ್ಲಿ ಬಾಲಕಿಯ ಮೇಲೆ ವ್ಯಕ್ತಿಯೊಬ್ಬನಿಂದ ಅತ್ಯಾಚಾರ ನಡೆದಿತ್ತು. ಆತ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಬಾಲಕಿ ಅಸಹಜ ರೀತಿಯಲ್ಲಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ನಮಗೆ ಬಂದಿತ್ತು. ಮೊದಲು ಬಾಲಕಿಯೇ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗುತಿತ್ತು. ಬಳಿಕ ಕುಟುಂಬ ನೀಡಿರುವ ದೂರಿನಲ್ಲಿ ಏಳು ಮಂದಿ ಆಕೆಯ ಮೇಲೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ ಎಂದು ಆಪಾದಿಸಲಾಗಿದೆ ಎಂದು ಬುಲಂದ್ ಶಹರ್ ಎಸ್ ಎಸ್ ಪಿ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!