ಮಂಗಳೂರು | ಕಾಂಗ್ರೆಸ್ ಸಮಾವೇಶಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ 15 ಸಾವಿರ ಜನರು

Prasthutha|

- Advertisement -

150 ಬಸ್, ನೂರಾರು ಕಾರು ಮತ್ತು ದ್ವಿಚಕ್ರ ವಾಹನಗಳ ವ್ಯವಸ್ಥೆ.. ಕೆಪಿಟಿಯಿಂದ ಅಡ್ಯಾರ್ ವರೆಗೆ ರ್‍ಯಾಲಿ

ಮಂಗಳೂರು : ನಗರದ ಹೊರವಲಯ ಅಡ್ಯಾರ್ ನಲ್ಲಿ ನಾಳೆ ನಡೆಯಲಿರುವ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಈ ಸಮಾವೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ 15 ಸಾವಿರ ಜನರು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

- Advertisement -

ಸಮಾವೇಶಕ್ಕೆ ತೆರಳಲು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಜನರಿಗೆ 150 ಬಸ್ ಮತ್ತು ನೂರಾರು ಕಾರುಗಳ ವ್ಯವಸ್ಥೆ ಮಾಡಲಾಗಿದೆ. ನೂರಾರು ದ್ವಿಚಕ್ರ ವಾಹನಗಳಲ್ಲೂ ಕಾರ್ಯಕರ್ತರು ಆಗಮಿಸಲಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಕೆಪಿಟಿ ಬಳಿಯಿಂದ ಸಮಾವೇಶ ನಡೆಯಲಿರುವ ಅಡ್ಯಾರ್ ವರೆಗೆ ಬಸ್, ಕಾರು, ದ್ವಿಚಕ್ರ ವಾಹನಗಳ ರ್‍ಯಾಲಿ ನಡೆಯಲಿದೆ. ಕಾರ್ಯಕರ್ತರ ರ್ಯಾಲಿಯಲ್ಲಿ ಇನಾಯತ್ ಅಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.


ಇನಾಯತ್ ಅಲಿ ಅವರು ಈ ಸಮಾವೇಶದ ಪ್ರಚಾರ ಸಮಿತಿಯ ಸಂಚಾಲಕರಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ,ಕೆ ಶಿವಕುಮಾರ್ ಸೂಚನೆಯಂತೆ ಕಳೆದ ಕೆಲ ದಿನಗಳಿಂದ ಮಂಗಳೂರಿನಲ್ಲೇ ಬೀಡುಬಿಟ್ಟು ಸಮಾವೇಶದ ಯಶಸ್ವಿಗಾಗಿ ದುಡಿಯುತ್ತಿದ್ದಾರೆ.
ಅಡ್ಯಾರ್ ನಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನವಾಗಿದ್ದು, ಅದಕ್ಕಾಗಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 10 ಸಾವಿರ ಜನರನ್ನು ಸೇರಿಸುವಂತೆ ಸೂಚನೆ ನೀಡಲಾಗಿದೆ.


ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಬಹುತೇಕ ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. 50 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ಸಮಾವೇಶಕ್ಕೆ ಚಾಲನೆ ಸಿಗಲಿದೆ.



Join Whatsapp