Home ಟಾಪ್ ಸುದ್ದಿಗಳು ತೆಲಂಗಾಣದಲ್ಲಿ ಭಾರಿ ಮಳೆ: 16 ಮಂದಿ ಸಾವು, ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹ

ತೆಲಂಗಾಣದಲ್ಲಿ ಭಾರಿ ಮಳೆ: 16 ಮಂದಿ ಸಾವು, ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹ

ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ 16 ಮಂದಿ ಮೃತಪಟ್ಟಿದ್ದಾರೆ.


ತೆಲಂಗಾಣದ ಹಲವೆಡೆ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಮುಖ್ಯಮಂತ್ರಿ ರೇವಂತ್ ರೆಡ್ಡಿ ನಿರ್ಧರಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಸಿಎಂ ರೇವಂತ್ ರೆಡ್ಡಿ, ಮಳೆ ಸಂಬಂಧಿತ ಅವಘಡಗಳಲ್ಲಿ ಮೃತರ ಸಂಬಂಧಿಕರಿಗೆ ತಲಾ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಅಲ್ಲದೆ, ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು. ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮನವಿ ಮಾಡಲಾಗುವುದು ಎಂದೂ ಅದು ತಿಳಿಸಿದೆ

Join Whatsapp
Exit mobile version