16ರಂದು ಸಾಗರ, ಹೊಸನಗರ ತಾಲೂಕುಗಳ ಶಾಲಾ- ಪಿಯು ಕಾಲೇಜುಗಳಿಗೆ ರಜೆ

Prasthutha|

ಶಿವಮೊಗ್ಗ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತಗೊಂಡಿದೆ. ಕೆಲವೆಡೆ ರಸ್ತೆಗಳು ಜಲಾವೃತಗೊಂಡಿದೆ.

- Advertisement -

ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 16ರಂದು ಜಿಲ್ಲೆಯ ಸಾಗರ, ಹೊಸನಗರ ತಾಲೂಕುಗಳ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸಾಗರ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಜುಲೈ 16ರಂದು ನಾಳೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ ನಾಯಕ್ ತಿಳಿಸಿದ್ದಾರೆ



Join Whatsapp