ಢಾಕಾ: ಬಸ್ ವೊಂದು ಕೊಳಕ್ಕೆ ಉರುಳಿದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದು 35 ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಢಾರಿಯಾದಿಂದ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ಕೊಳಕ್ಕೆ ಉರುಳಿದೆ. ಬಸ್ ಮಿತಿಮೀರಿ ಜನರನ್ನ ತುಂಬಿದ್ದರಿಂದ ಕೊಳದಲ್ಲಿ ಮುಳುಗಿದೆ.
17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಫಿರೋಜ್ಪುರದ ಭಂಡಾರಿಯಾ ಉಪಜಿಲಾ ಮತ್ತು ಜಲ್ಕತಿಯ ರಾಜಾಪುರ ಪ್ರದೇಶದ ನಿವಾಸಿಗಳು ಹೆಚ್ಚಿನವರಿದ್ದಾರೆ ಎಂದು ಬಾರಿಶಾಲ್ ವಿಭಾಗೀಯ ಆಯುಕ್ತ ಎಂ.ಡಿ ಶೌಕತ್ ಅಲಿ ತಿಳಿಸಿದ್ದಾರೆ