ಐಜ್ವಾಲ್: ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು ಕನಿಷ್ಠ 17 ಕಾರ್ಮಿಕರು ಬುಧವಾರ ಸಾವನ್ನಪ್ಪಿರುವ ಭೀಕರ ಘಟನೆ ಮಿಜೋರಾಂನ ಸೈರಾಂಗ್ ಪ್ರದೇಶದ ಬಳಿ ನಡೆದಿದೆ.
ರಾಜಧಾನಿ ಐಜ್ವಾಲ್ ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಸೈರಾಂಗ್ನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ.
ಘಟನೆಯ ವೇಳೆ 35-40 ಕಾರ್ಮಿಕರು ಸ್ಥಳದಲ್ಲಿ ಕಾರ್ಯನಿರತರಾಗಿದ್ದರು. ಏಕಾಏಕಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದೆ. ಅದರಡಿ ಕಾರ್ಮಿಕರು ಸಿಲುಕಿದ್ದು, ಸದ್ಯಕ್ಕೆ 17 ಮಂದಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಸಿಕ್ಕಿದೆ.
ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
Under construction railway over bridge at Sairang, near Aizawl collapsed today; atleast 17 workers died: Rescue under progress.
— Zoramthanga (@ZoramthangaCM) August 23, 2023
Deeply saddened and affected by this tragedy. I extend my deepest condolences to all the bereaved families and wishing a speedy recovery to the… pic.twitter.com/IbmjtHSPT7