ಬೆಂಗಳೂರು: ಸರ್ಕಾರಿ ನೌಕರರು ಮುಷ್ಕರಕ್ಕೆ ಇಳಿದಿರುವುದರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಸರ್ಕಾರಿ ನೌಕರರ ವೇತನದಲ್ಲಿ ಶೇಕಡಾ 17ರಷ್ಟು ಹೆಚ್ಚಿಸುವುದಾಗಿ ಭರವಸೆ ನೀಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರ ವೇತನ ಶೇಕಡಾ 17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಲಾಗಿದೆ. ನೌಕರರ ವೇತನ ಹೆಚ್ಚಳ ಮಾಡಬೇಕು ಎಂಬುದು ನೌಕರರ ಸಂಘದ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ NPS ಬಗ್ಗೆ ಅಧ್ಯಯನ ಮಾಡಲು ACS ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರಿಸಿಕೊಳ್ಳಲಾಗುವುದು.
ಈ ಎಲ್ಲಾ ಕ್ರಮಗಳಿಂದಾಗಿ ಸರ್ಕಾರಿ ನೌಕರರು ಮುಷ್ಕರ ಕೈಬಿಡುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.