ಬೆಡ್ ಬ್ಲಾಕಿಂಗ್ ಹಗರಣ | 17 ಮಂದಿ ಗುತ್ತಿಗೆ ಸಿಬ್ಬಂದಿ ಅಮಾನತು

Prasthutha|

ಬೆಂಗಳೂರು : ಬೆಡ್ ಬ್ಲಾಕಿಂಗ್ ಹಗರಣ ಬಯಲಾದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯ ದಕ್ಷಿಣ ವಲಯದ ವಾರ್ ರೂಂ ನ 17 ಮಂದಿ ಗುತ್ತಿಗೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

- Advertisement -


“ಸಂಸದ ತೇಜಸ್ವಿ ಸೂರ್ಯ ಓದಿದ ಪಟ್ಟಿಯಲ್ಲಿದ್ದ 17 ಮಂದಿಯನ್ನು ಅಮಾನತು ಮಾಡಲಾಗಿದ್ದು, ಕೆಲಸಕ್ಕೆ ಹಾಜರಾಗದಂತೆ ಅವರಿಗೆ ಸೂಚಿಸಲಾಗಿದೆ. ಉಳಿದ ತನಿಖೆಯನ್ನು ಪೊಲೀಸರು ಮಾಡಲಿದ್ದಾರೆ. ಆ ವರದಿಯ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಬಿಬಿಎಂಪಿ ವಿಶೇಷ ಆಯುಕ್ತೆ ತುಳಸಿ ಮುದ್ದಿನೇನಿ ತಿಳಿಸಿದ್ದಾರೆ.


ಬೆಡ್ ಬ್ಲಾಕಿಂಗ್ ಹಗರಣದ ಸಂಬಂಧ ಸಿಸಿಬಿ ತನಿಖೆ ಚುರುಕುಗೊಳಿಸಲಾಗಿದ್ದು, ಈಗಾಗಲೇ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

- Advertisement -

ಜಯನಗರ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ಇದೀಗ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಸಿಸಿಬಿ ಸ್ವಯಂ ಪ್ರೇರಿತ ಕೇಸ್ ದಾಖಲು ಮಾಡಿದ್ದಾರೆ. ಇದು ಒಂದೇ ವಲಯದಲ್ಲಿ ಮಾತ್ರ ಅಲ್ಲ. ಬಿಬಿಎಂಪಿಯ ಎಲ್ಲಾ ವಲಯದಲ್ಲಿ ನಡೆದಿರಬಹುದು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗಿದ್ದು, ಮತ್ತಷ್ಟು ಜನರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Join Whatsapp