ಓಕ್ಸಾಕಾ( ಮೆಕ್ಸಿಕೋ): ಬಸ್ ಅಪಘಾತ ಸಂಭವಿಸಿ, 18 ಮಂದಿ ಸಾವನ್ನಪ್ಪಿರುವ ಘಟನೆ ಮೆಕ್ಸಿಕನ್ ರಾಜ್ಯದ ಓಕ್ಸಾಕಾದಲ್ಲಿ ಶುಕ್ರವಾರ ನಡೆದಿದೆ.
ಈ ಘಟನೆ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ, ಈ ಭೀಕರ ಅಪಘಾತದಲ್ಲಿ ಮೃತಪಟ್ಟ ಬಹುತೇಕ ಪ್ರಯಾಣಿಕರು ವಲಸಿಗರು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬಲಿಯಾದವರಲ್ಲಿ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಇವರೆಲ್ಲರೂ ವೆನೆಜುವೆಲಾ ಮತ್ತು ಹೈಟಿಯಿಂದ ಬಂದವರು ಎಂದು ಓಕ್ಸಾಕಾ ರಾಜ್ಯದ ಅಟಾರ್ನಿ ಜನರಲ್ ಮಾಹಿತಿ ನೀಡಿದ್ದಾರೆ. ಕನಿಷ್ಠ 27 ಜನರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.