Home ಟಾಪ್ ಸುದ್ದಿಗಳು ರಾಜ್ಯದಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಓಪನ್

ರಾಜ್ಯದಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಓಪನ್

ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ. ಇಂದಿರಾ ಕ್ಯಾಂಟೀನ್ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗಾಗಿ ಇಲಾಖೆಗೆ 240 ಕೋಟಿ ರೂ. ಹಣ ನೀಡಿದ್ದಾರೆ. ಬೆಳಗಾವಿಯಲ್ಲೂ ಕೂಡ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು. ಹೊಸದಾಗಿ ಇಂದಿರಾ ಕ್ಯಾಂಟೀನ್ ಗಳ ಪುನಶ್ಚೇತನ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಬೇಕಂತಲೇ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಕೊಡದೆ ನಿರ್ವಹಣೆ ಮಾಡದೆ ಹಾಳು ಮಾಡಿದ್ದರು. ಜನರಿಗೆ ಯಾವ ಊಟ ಇಷ್ಟ ಆಗುತ್ತೆ ಅದನ್ನ ಕೊಡುವುದು ನಮ್ಮ ಉದ್ದೇಶವಾಗಿದೆ. ಈಗಾಗಲೇ ದರ 5 ರೂ ಹೆಚ್ಚಿಗೆ ಮಾಡಿದ್ದು ಅದನ್ನ ಸರ್ಕಾರ ಭರಿಸುತ್ತದೆ. ಜನರಿಗೆ ಹೆಚ್ಚಿಗೆ ಒಂದು ರೂಪಾಯಿ ಕೊಡಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version