ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ಸಿಎಂ ಆಗುವುದಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ನಾವು ಬೆಂಬಲ ನೀಡುತ್ತೇವೆ ಎಂದು ಓಪನ್ ಆಫರ್ ನೀಡಿದ್ದಾರೆ.
ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.