Home ಟಾಪ್ ಸುದ್ದಿಗಳು ಕೊಟ್ಟಿಗೆಹಾರದ ಚೆಕ್ ಪೋಸ್ಟ್’ನಲ್ಲಿ 2.50 ಲಕ್ಷ ರೂ. ನಗದು ವಶ

ಕೊಟ್ಟಿಗೆಹಾರದ ಚೆಕ್ ಪೋಸ್ಟ್’ನಲ್ಲಿ 2.50 ಲಕ್ಷ ರೂ. ನಗದು ವಶ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಕೊಟ್ಟಿಗೆಹಾರದ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ತೀವ್ರಗೊಳಿಸಲಾಗಿದ್ದು, ತಪಾಸಣೆ ವೇಳೆ 2.5 ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಧರ್ಮಸ್ಥಳ ಮತ್ತು ಕಟೀಲ್ ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ 2.50 ಲಕ್ಷ ಹಣ ಇದಾಗಿದೆ ಎನ್ನಲಾಗಿದೆ.
ತುಮಕೂರು ಜಿಲ್ಲೆಯ ಪಾವಗಡದಿಂದ ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ಫಾರ್ಚುನರ್ ವಾಹನದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿ ಬಳಿ ಇದ್ದ ದಾಖಲೆ ಇಲ್ಲದ 2.50 ಲಕ್ಷ ರೂ. ಹಣವನ್ನು ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Join Whatsapp
Exit mobile version