ಮಂಗಳೂರು : ಗಾಂಜಾ ವಶ | ಒಮನ್ ದೇಶದ ಪ್ರಜೆ ಸೇರಿದಂತೆ ಇಬ್ಬರ ಬಂಧನ

Prasthutha: June 14, 2021

ಮಂಗಳೂರು : ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಮಂಗಳೂರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಒಮನ್ ದೇಶದ ಪ್ರಜೆ ಅಹ್ಮದ್ ಮುಸಬಾ ಅಲ್ ಮಹಾಮಾನಿ ಹಾಗೂ ಹಿಮಾಚಲ ಪ್ರದೇಶದ ರಾಮ್ ಎಂದು ಗುರುತಿಸಲಾಗಿದೆ.

ಒಮನ್ ಪ್ರಜೆ ಅಹ್ಮದ್ ಮುಸಬಾ 6 ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಆಗಮಿಸಿದ್ದ. ಈ ಮಧ್ಯೆ ಮಂಗಳೂರು ನಗರದ ಹೊಟೇಲೊಂದರಲ್ಲಿ ಹಿಮಾಚಲ ಪ್ರದೇಶದ ರಾಮ್ ಜತೆ ಬಂಧಿಸಲಾಗಿದ್ದು, ಬಂಧಿತರಿಂದ ಎಂಡಿಎಂಎ ಹಾಗೂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಎನ್‌ಡಿಪಿಎಸ್ ಕಾಯ್ದೆ ಹಾಗೂ ಒಮನ್ ಪ್ರಜೆಯ ಪಾಸ್‌ಪೋರ್ಟ್ ಅವಧಿ ಮುಗಿದು ಅಕ್ರಮವಾಗಿ ನೆಲೆಸಿದ್ದರಿಂದ ಆ ನೆಲೆಯಲ್ಲಿಯೂ ಈತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಂಧಿತರಿಂದ 51 ಗ್ರಾಂ ಗಾಂಜಾ ಹಾಗೂ 2 ಗ್ರಾಂನಷ್ಟು ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಗೆ ಗಾಂಜಾ ಹಾಗೂ ಎಂಡಿಎಂಎ ಹೇಗೆ ಬಂತು ಹಾಗೂ ಗೋವಾದಿಂದ ಡ್ರಗ್ಸ್ ತಂದು ಇಲ್ಲಿ ಸ್ಥಳೀಯವಾಗಿ ಮಾರಾಟ ಮಾಡುತ್ತಿದ್ರಾ ಎಂಬುದರ ಕುರಿತು ತನಿಖೆ ನಡೆಸಲಾಗ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ