Home ಟಾಪ್ ಸುದ್ದಿಗಳು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಿಂದ 2 ದಿನಗಳ ರಾಷ್ಟ್ರವ್ಯಾಪಿ ಮುಷ್ಕರ; 20 ಕೋಟಿಗೂ ಮಿಕ್ಕ...

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಿಂದ 2 ದಿನಗಳ ರಾಷ್ಟ್ರವ್ಯಾಪಿ ಮುಷ್ಕರ; 20 ಕೋಟಿಗೂ ಮಿಕ್ಕ ಕಾರ್ಮಿಕರ ಬೆಂಬಲ

ಹೊಸದಿಲ್ಲಿ: ಕಾರ್ಮಿಕರು, ರೈತರು ಹಾಗೂ  ಜನರ ಮೇಲೆ ಪರಿಣಾಮ ಬೀರುವ ಸರಕಾರದ ನೀತಿಗಳನ್ನು ಪ್ರತಿಭಟಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯಿಂದ 48 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾದ ಹಿನ್ನೆಲೆಯಲ್ಲಿ ಸೋಮವಾರ ಹಲವಾರು ರಾಜ್ಯಗಳಲ್ಲಿ ಮುಷ್ಕರ ಆರಂಭವಾಗಿದೆ.

 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರಕಾರದ ಯೋಜನೆ ಹಾಗೂ  ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ.

ಉಕ್ಕು, ತೈಲ, ಟೆಲಿಕಾಂ, ಕಲ್ಲಿದ್ದಲು, ಅಂಚೆ, ಆದಾಯ ತೆರಿಗೆ, ತಾಮ್ರ ಹಾಗೂ  ವಿಮೆಯಂತಹ ವಿವಿಧ ಕ್ಷೇತ್ರಗಳ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರೈಲ್ವೇ ಹಾಗೂ  ರಕ್ಷಣಾ ವಲಯದ ಒಕ್ಕೂಟಗಳು ನೂರಾರು ಸ್ಥಳಗಳಲ್ಲಿ ಮುಷ್ಕರಕ್ಕೆ ಬೆಂಬಲ ನೀಡುವ ನಿರೀಕ್ಷೆಯಿದೆ. ರಸ್ತೆ, ಸಾರಿಗೆ ಹಾಗೂ  ವಿದ್ಯುತ್ ನೌಕರರು ಸಹಿತ

ದೇಶಾದ್ಯಂತ 20 ಕೋಟಿಗೂ ಹೆಚ್ಚು ಸಂಘಟಿತ-ಅಸಂಘಟಿತ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಆಲ್ ಇಂಡಿಯನ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್ಜೀತ್ ಕೌರ್ ತಿಳಿಸಿದ್ದಾರೆ.

Join Whatsapp
Exit mobile version