Home ಟಾಪ್ ಸುದ್ದಿಗಳು ಎರಡು ಅಂತಸ್ತಿನ ಕಟ್ಟಡ ಕುಸಿತ: ನವಜಾತ ಶಿಶು ಸೇರಿ ಇಬ್ಬರು ಸಾವು

ಎರಡು ಅಂತಸ್ತಿನ ಕಟ್ಟಡ ಕುಸಿತ: ನವಜಾತ ಶಿಶು ಸೇರಿ ಇಬ್ಬರು ಸಾವು

ಭೀವಂಡಿ: ಎರಡು ಅಂತಸ್ತಿನ ಕಟ್ಟಡ ಕುಸಿದು ನವಜಾತ ಶಿಶು ಸೇರಿ ಇಬ್ಬರು ಮೃತಪಟ್ಟಿರುವ ಘಟನೆ‌ ಮಹಾರಾಷ್ಟ್ರದ ಭೀವಂಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಅಪಘಾತದಲ್ಲಿ ಇತರ ಐವರು ಗಾಯಗೊಂಡಿದ್ದಾರೆ.

ಮೃತರನ್ನು ಉಜ್ಮಾ ಅತೀಫ್ ಮೊಮಿನ್ (40) ಮತ್ತು ತಸ್ಲಿಮಾ ಮೊಸರ್ ಮೊಮಿನ್ (8 ತಿಂಗಳು) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರು ಮಹಿಳೆಯರು ಮತ್ತು 65 ವರ್ಷದ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಭಿವಂಡಿ ನಗರದ ಧೋಬಿ ತಲಾಬ್ ಪ್ರದೇಶದ ದುರ್ಗಾ ರಸ್ತೆಯಲ್ಲಿರುವ ಆರು ಫ್ಲಾಟ್ ಕಟ್ಟಡವು ಮಧ್ಯರಾತ್ರಿ 12.35 ಕ್ಕೆ ಕುಸಿದಿದೆ.

Join Whatsapp
Exit mobile version