ಗಣರಾಜ್ಯೋತ್ಸವ ಹಿಂಸಾಚಾರ| ಜೈಲಿಗೆ ಹೋದ ರೈತರಿಗೆ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ

Prasthutha|

ಹೊಸದಿಲ್ಲಿ: ಗಣರಾಜ್ಯೋತ್ಸವದಂದು ರೈತರು ಆಯೋಜಿಸಿದ್ದ ಟ್ರ್ಯಾಕ್ಟರ್ ರ‍್ಯಾಲಿಯ ವೇಳೆ ದೆಹಲಿಯಲ್ಲಿ ಬಂಧಿತರಾದ 83 ಪ್ರತಿಭಟನಾಕಾರರಿಗೆ ಪಂಜಾಬ್ ಸರ್ಕಾರ ಆರ್ಥಿಕ ನೆರವು ಘೋಷಿಸಿದೆ.

- Advertisement -

ರ‍್ಯಾಲಿಯ ವೇಳೆ ಬಂಧಿತರಾದ 83 ಮಂದಿಗೆ ಸರ್ಕಾರ ಪರಿಹಾರ ನೀಡಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆಗೆ ಸರ್ಕಾರ ತನ್ನ ಬೆಂಬಲ ಸೂಚಿಸುವ ಸಲುವಾಗಿ 2021 ಜನವರಿ 26 ರಂದು ರಾಷ್ಟ್ರ ರಾಜಧಾನಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿಯನ್ನು ಆಯೋಜಿಸಿದ್ದಕ್ಕಾಗಿ ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ 83 ಜನರಿಗೆ ಪರಿಹಾರವಾಗಿ 2 ಲಕ್ಷ ರೂಪಾಯಿ ನೀಡಲು ನಿರ್ಧರಿಸಿರುವುದಾಗಿ ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

- Advertisement -

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆ ವಿರೋಧಿಸಿ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾನೂನು ಹಿಂಪಡೆಯುವವರೆಗೂ ಪ್ರತಿಭಟನೆ ಮುಂದುವರಿಸಲು ರೈತರು ನಿರ್ಧರಿಸಿದ್ದಾರೆ. ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವಂತೆಯೇ ರೈತರನ್ನು ಬೆಂಬಲಿಸುವ ಪಂಜಾಬ್ ಸರ್ಕಾರದ ಕ್ರಮ ಒಕ್ಕೂಟ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

Join Whatsapp