ಕರ್ನಾಟಕದಿಂದ ಗೋವಾಗೆ ಪ್ರತಿದಿನ 2 ಟನ್ ಹೆಚ್ಚು ದನದ ಮಾಂಸ ಸಾಗಾಟ: ಸಿಎಂ ಸಾವಂತ್

Prasthutha|

ಗೋ ಮಾಂಸಕ್ಕಾಗಿ ಕರ್ನಾಟಕವನ್ನು ಅವಲಂಬಿಸಿರುವ ಗೋವಾ

- Advertisement -

ಪಣಜಿ: ಪ್ರತಿದಿನ 2,000 ಕೆಜಿಗೂ ಹೆಚ್ಚು ದನದ ಮತ್ತು ಎಮ್ಮೆಯ ಮಾಂಸವನ್ನು ಕರ್ನಾಟಕವು ಗೋವಾಕ್ಕೆ ಕಳುಹಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.


ಗೋವಾ ವಿಧಾನಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ಕಳೆದ ಆರು ತಿಂಗಳಲ್ಲಿ ಕರ್ನಾಟಕದಿಂದ ಗೋವಾಗೆ 388 ಟನ್ ಗಳಷ್ಟು ದನ ಮತ್ತು ಎಮ್ಮೆಯ ಮಾಂಸವನ್ನು ತರಿಸಿಕೊಳ್ಳಲಾಗಿದೆ. ಕರ್ನಾಟಕದ ವ್ಯಾಪಾರಿಗಳು ಪ್ರತಿದಿನ ಗೋವಾಗೆ ದನದ ಮಾಂಸ ಕಳುಹಿಸುತ್ತಾರೆ ಎಂದು ಅವರು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

- Advertisement -


ಗೋವಾ ಮತ್ತು ಕರ್ನಾಟಕ ಗಡಿಯಲ್ಲಿ ಸಂಬಂಧಿತ ಅಧಿಕಾರಿಗಳು ಕರ್ನಾಟಕದ ದನದ ಮಾಂಸ ವ್ಯಾಪಾರಿಗಳಿಂದ ಸಂಗ್ರಹಿಸುವ ತೆರಿಗೆಯ ಮೊತ್ತದಿಂದ ಈ ಪ್ರಮಾಣವನ್ನು ಲೆಕ್ಕಹಾಕಲಾಗಿದೆ. ಪ್ರತಿದಿನ ಕರ್ನಾಟಕದಿಂದ ಸರಾಸರಿ 2,120 ಕೆ.ಜಿಯಷ್ಟು ದನ ಮತ್ತು ಎಮ್ಮೆಯ ಮಾಂಸ ಗೋವಾಗೆ ಬರುತ್ತದೆ ಎಂದು ತೆರಿಗೆ ದಾಖಲೆಗಳು ಹೇಳುತ್ತವೆ ಎಂದು ಮುಖ್ಯಮಂತ್ರಿ ಸಾವಂತ್ ಲಿಖಿತ ಉತ್ತರದಲ್ಲಿ ವಿವರಿಸಿದ್ದಾರೆ.


ಕರ್ನಾಟಕ ವಿಧಾನಸಭೆಯ ಗೋಹತ್ಯೆ ತಡೆ ಕಾಯ್ದೆಯನ್ನು ಜಾರಿಗೆ ತಂದ ನಂತರ ಗೋವಾಗೆ ಪೂರೈಕೆಯಾಗುವ ದನದ ಮಾಂಸದಲ್ಲಿ ಭಾರಿ ವ್ಯತ್ಯಯವಾಗಿದೆ ಎಂದು ಅವರು ಹೇಳಿದ್ದಾರೆ. ಗೋವಾದ ಒಟ್ಟು ಜನಸಂಖ್ಯೆಯಲ್ಲಿ ಶೇ 30 ರಷ್ಟು ಜನರು ದನ ಮತ್ತು ಎಮ್ಮೆಯ ಮಾಂಸವನ್ನು ತಿನ್ನುತ್ತಾರೆ. ಈ ಮಾಂಸಕ್ಕಾಗಿ ಗೋವಾ ರಾಜ್ಯವು ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಅವಲಂಬಿಸಿವೆ ಎಂದು ಅವರು ತಿಳಿಸಿದ್ದಾರೆ.

Join Whatsapp