5ನೇ ಮಹಡಿಯಿಂದ ಕೆಳಗೆ ಬಿದ್ದು 2 ವರ್ಷದ ಮಗು ಮೃತ್ಯು

Prasthutha: December 18, 2021

ಬೆಂಗಳೂರು: ಅಪಾರ್ಟ್ಮೆಂಟಿನ ಐದನೇ ಮಹಡಿಯಿಂದ ಕೆಳಗೆಬಿದ್ದು ಎರಡು ವರ್ಷದ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ರಾಜ್ಯ ರಾಜಧಾನಿಯ ಇಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಮೃತ ಮಗು ಎರಡು ವರ್ಷದವನಾಗಿದ್ದು, ದಿವ್ಯಾಂಶ್ ಎಂದು ಗುರುತಿಸಲಾಗಿದೆ. ಮಗುವಿನ ಅಜ್ಜಿ ನಗರದಲ್ಲಿ ಬಾಡಿಗೆ ಮನೆ ನೋಡಲು ಮಗುವಿನೊಂದಿಗೆ ಹೋದಾಗ ಘಟನೆ ನಡೆದಿದೆ.

ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ ನ ಅಪಾರ್ಟ್ಮೆಂಟ್ ಒಂದರಲ್ಲಿ ಮನೆ ಬಾಡಿಗೆಗಿರುವುದು ಗಮನಕ್ಕೆ ಬಂದ ಹಿನ್ನೆಲೆ ಶುಕ್ರವಾರದಂದು ಸಂಜೆ ಅಜ್ಜಿ ಮೊಮ್ಮಗನನ್ನು ಕರೆದುಕೊಂಡು ಐದನೇ ಮಹಡಿಯಲ್ಲಿರುವ ಮನೆ ನೋಡಲು ಹೋಗಿದ್ದರು. ಆ ಸಂದರ್ಭದಲ್ಲಿ ದಿವ್ಯಾಂಶ್ ಬಾಲ್ಕನಿಯಲ್ಲಿ ಆಟವಾಡುತ್ತಾ ಅಲ್ಲಿದ್ದ ಪ್ಲಾಸ್ಟಿಕ್ ಶೀಟ್ ಮೇಲೆ ಕಾಲಿಟ್ಟು, ಪಕ್ಕದಲ್ಲಿದ್ದ ಹೋಲ್ ನಿಂದ ಕೆಳಗೆ ಬಿದ್ದಿದ್ದಾನೆ.

ಗಂಭೀರ ಗಾಯಗೊಂಡವನು ಸ್ಥಳದಲ್ಲೇ ಮೃತಪಟ್ಡಿದ್ದಾನೆ ಎನ್ನಲಾಗಿದೆ. ಇಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!