ಮೈಸೂರು: ಬಿಸಿ ನೀರು ಮೈಮೇಲೆ ಬಿದ್ದು 2 ವರ್ಷದ ಮಗು ಮೃತಪಟ್ಟ ಘಟನೆ ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ರಾಮು, ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಮಗುವಿಗೆ ಸ್ನಾನ ಮಾಡಲೆಂದು ತಣ್ಣೀರು ತರುವುದಕ್ಕೆ ತಾಯಿ ಹೋಗಿದ್ದರು. ಈ ವೇಳೆ ಮಗು ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News