ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಗದೇ 20ಕ್ಕೂ ಅಧಿಕ ಮಂದಿ ಸಾವು!

Prasthutha|

ಚಾಮರಾಜನಗರ : ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಮಾಡುವಲ್ಲಿ ಸರಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್‌ ಸಿಗದೇ 20ಕ್ಕೂ ಅಧಿಕ ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಸದ್ಯ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಮುಂದೆ ನೂರಾರು ಮಂದಿ ಜಮಾಯಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು , ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಘಟನೆಯ ಹೊಣೆಯನ್ನು ಯಾರು ಹೊತ್ತಿಕೊಳ್ಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,68,147 ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,417 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,18,959 ಕ್ಕೆ ಏರಿಕೆಯಾಗಿದೆ.

Join Whatsapp