Home ಕರಾವಳಿ ಮಂಗಳೂರಿಗೆ ಬರುತ್ತಿದ್ದ ಐರಾವತ ಬಸ್ ಅಪಘಾತ: 20 ಮಂದಿಗೆ ಗಾಯ

ಮಂಗಳೂರಿಗೆ ಬರುತ್ತಿದ್ದ ಐರಾವತ ಬಸ್ ಅಪಘಾತ: 20 ಮಂದಿಗೆ ಗಾಯ

ಕಾರವಾರ: ಭಟ್ಕಳ ತಾಲೂಕಿನ ತೆರ್ನಮಕ್ಕಿ ಚರ್ಚ್ ಸಮೀಪ ಕೆಎಸ್ ಆರ್ ಟಿಸಿ ವೋಲ್ವೋ ಬಸ್ ಹಾಗೂ ಮಹೀಂದ್ರಾ ಪ್ಯಾಸೆಂಜರ್ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್ ನ ಮುಂಬದಿ ಸೀಟ್ ನಲ್ಲಿ ಕುಳಿತ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗ, ಎಡಭಾಗ ಹಾಗೂ ಟೆಂಪೋ ಹಿಂಭಾಗಕ್ಕೆ ಭಾರೀ ಹಾನಿಯಾಗಿದೆ.

ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version