ಬಸ್ ಪಲ್ಟಿ: ವಿದ್ಯಾರ್ಥಿಗಳು ಸೇರಿ 20 ಪ್ರಯಾಣಿಕರಿಗೆ ಗಾಯ

Prasthutha|

ಬೆಳಗಾವಿ: ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳು ಸೇರಿ 20 ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ನಡೆದಿದೆ.

- Advertisement -


ಇಂದು (ಸೆಪ್ಟೆಂಬರ್ 26) ಹುಲಕುಂದ ಗ್ರಾಮದಿಂದ ರಾಮದುರ್ಗ ಕಡೆಗೆ ಹೊರಟ್ಟಿದ್ದ 50ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್, ಫಾಟಾ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದು ಬಳಿ ಪಲ್ಟಿಯಾಗಿದೆ.

ಘಟನೆಯಲ್ಲಿ 20 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಯಾಳುಗಳನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆ ಸಾಗಿಸಲಾಗಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Join Whatsapp