Home ಟಾಪ್ ಸುದ್ದಿಗಳು ಕೊಡಗು | ವರದಕ್ಷಿಣೆ ಕಿರುಕುಳ ಆರೋಪ: ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ

ಕೊಡಗು | ವರದಕ್ಷಿಣೆ ಕಿರುಕುಳ ಆರೋಪ: ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ

ಮಡಿಕೇರಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಆಂಗೇರಿ ಗ್ರಾಮದಲ್ಲಿ ನಡೆದಿದೆ


ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ನೇಣುಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Join Whatsapp
Exit mobile version