200 ಕೋಟಿ ರೂ. ಸುಲಿಗೆ ಪ್ರಕರಣ: ನಟಿ ನೋರಾ ಫತೇಹಿ ಮತ್ತೆ ವಿಚಾರಣೆ

Prasthutha|

ನವದೆಹಲಿ: ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರು ಮತ್ತೆ ವಿಚಾರಣೆ ನಡೆಸಿದ್ದಾರೆ.

- Advertisement -


ಶುಕ್ರವಾರ ದೆಹಲಿಯ ಮಂದಿರ ಮಾರ್ಗದಲ್ಲಿರುವ ಅವರ ಕಚೇರಿಯಲ್ಲಿ ಸುಮಾರು ಏಳು ಗಂಟೆಗಳ ಕಾಲ ಪೊಲೀಸರು ನೋರಾ ಫತೇಹಿ ಅವರನ್ನು ಪ್ರಶ್ನಿಸಿದ್ದಾರೆ.


ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಈ ಹಿಂದೆ ಸುಕೇಶ್ ಚಂದಶೇಖರ್ ಮತ್ತು ಫತೇಹಿ ಅವರನ್ನು ಒಟ್ಟಿಗೆ ವಿಚಾರಣೆ ನಡೆಸಿತ್ತು.

Join Whatsapp