Home ಟಾಪ್ ಸುದ್ದಿಗಳು ಲುಲು ಗ್ರೂಪ್ ನೊಂದಿಗೆ 2000 ಕೋಟಿ ರೂ. ಹೂಡಿಕೆ ಒಪ್ಪಂದ ಮಾಡಿಕೊಂಡ ಬೊಮ್ಮಾಯಿ

ಲುಲು ಗ್ರೂಪ್ ನೊಂದಿಗೆ 2000 ಕೋಟಿ ರೂ. ಹೂಡಿಕೆ ಒಪ್ಪಂದ ಮಾಡಿಕೊಂಡ ಬೊಮ್ಮಾಯಿ

►►ರಾಜ್ಯದಲ್ಲಿ ನಾಲ್ಕು ಶಾಪಿಂಗ್ ಮಾಲ್, 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಲು ಮುಂದಾದ ಲುಲು

ದಾವೋಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಮತ್ತು ಲುಲು ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಎಂ. ಎ ಯೂಸುಫ್ ಅಲಿ ಉಪಸ್ಥಿತಿಯಲ್ಲಿ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.


ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.


ವಿಶ್ವದ ಪ್ರಮುಖ ಸಂಸ್ಥೆಗಳೊಂದಿಗೆ ಸಿಎಂ ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು. ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸುವಂತೆ ತಿಳಿಸಿದ ಮುಖ್ಯ ಮಂತ್ರಿಗಳು, ಧಾರವಾಡದಲ್ಲಿ ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್ ನ್ನು ಸಹ ಪರಿಗಣಿಸಬಹುದಾಗಿದೆ ಎಂದರು.


ಜ್ಯೂಬಿಲಿಯಂಟ್ ಫುಡ್ ವರ್ಕ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ ಅಂಡ್ ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಿದೆ. ಪ್ರಸ್ತುತ ರಾಜ್ಯದಲ್ಲಿ 9000 ಜನರು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ.


ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Join Whatsapp
Exit mobile version