ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಸುಮಾರು 2,000 ಪುಟಗಳಷ್ಟು ದೋಷಾರೋಪಣೆ ಪಟ್ಟಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. 123 ಸಾಕ್ಷಿಗಳನ್ನು ಕಲೆಹಾಕಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಮನೆಯಲ್ಲಿ ನಿರಂತರವಾಗಿ ಅತ್ಯಾಚಾರ, ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರುವುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.
ಹೊಳೆನರಸೀಪುರ ಮನೆಯಿಂದ ಬೆಂಗಳೂರು ಮನೆಗೆ ಕರೆದುಕೊಂಡು ಬಂದು ಕೂಡ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ ಎಂದು ತನಿಖೆ ನಡೆಸಿದ ಎಸ್‌ಐಟಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ ಎಂದು ತಿಳಿದುಬಂದಿದೆ