ರಸ್ತೆ ಅಪಘಾತ: 2019ರ ಮಿಸ್ ಕೇರಳ ಅನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಮೃತ್ಯು

Prasthutha|

ಕೊಚ್ಚಿ: ಕಾರು ಮರಕ್ಕೆ ಗುದ್ದಿದ ಪರಿಣಾಮ ಇಬ್ಬರು ಯುವತಿಯರು ದಾರುಣ ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯ ವೈಟಿಲದಲ್ಲಿ ನಡೆದಿದೆ.

- Advertisement -


2019ರಲ್ಲಿ ಮಿಸ್ ಕೇರಳ ಕಿರೀಟ ಮುಡಿಗೇರಿಸಿಕೊಂಡಿದ್ದ ಅನ್ಸಿ ಕಬೀರ್ (24) ಮತ್ತು ಅದೇ ಸ್ಫರ್ದೆಯಲ್ಲಿ ರನ್ನರ್ ಅಪ್ ಆಗಿದ್ದ ಅಂಜನಾ ಶಾಜನ್ (25) ರಸ್ತೆ ಅಪಘಾತದಲ್ಲಿ ಮೃತಪಟ್ಟವರು.

ತ್ರಿಶೂರ್ ನಿಂದ ಅನ್ಸಿ ಹಾಗೂ ಅಂಜನಾ ಪ್ರಯಾಣಿಸುತ್ತಿದ್ದ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಗುದ್ದಿದೆ. ಈ ವೇಳೆ ಕಾರಿನಲ್ಲಿ ಒಟ್ಟು ನಾಲ್ವರಿದ್ದರು. ಅನ್ಸಿ ಹಾಗೂ ಅಂಜನಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Join Whatsapp