2023 ವಿಧಾನಸಭಾ ಚುನಾವಣೆ ಹಿನ್ನೆಲೆ; ಬೆಂಗಳೂರಿನಲ್ಲಿ ಉಳಿಯಲು ನಿರ್ಧರಿಸಿದ ಸುರ್ಜೇವಾಲಾ

Prasthutha|

ಬೆಂಗಳೂರು: ಎಐಸಿಸಿ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಉಳಿಯಲು ನಿರ್ಧರಿಸಿದ್ದಾರೆ ಮತ್ತು ರಾಜ್ಯದಲ್ಲಿ 10-15 ದಿನ ಕಳೆಯಲು ನಿರ್ಧರಿಸಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಸಮೀಪದಲ್ಲಿ ಮನೆಯೊಂದನ್ನು ಬಾಡಿಗೆ ಪಡೆಯಲು ಸುರ್ಜೇವಾಲಾ  ಎದುರು ನೋಡುತ್ತಿದ್ದಾರೆ ಎಂದು ಕೆಪಿಸಿಸಿ ಎಂದು ಮೂಲಗಳು ತಿಳಿಸಿವೆ.

- Advertisement -

ಪ್ರಸ್ತುತ ಉದಯಪುರ ಚಿಂತನ ಶಿಬಿರದಲ್ಲಿ ಬ್ಯುಸಿಯಾಗಿರುವ ಅವರು ಸಭೆ ನಡೆಸಲು ಅನುಕೂಲವಾಗುವಂತಹ ಮನೆ ನೋಡುತ್ತಿದ್ದಾರೆ. ಅದರ ಖರ್ಚನ್ನು ಕೆಪಿಸಿಸಿ ಭರಿಸಲಿದೆ ಎನ್ನಲಾಗಿದೆ.

2020ರಲ್ಲಿ ಸುರ್ಜೇವಾಲಾ ಅವರನ್ನು ರಾಜ್ಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದ್ದು, ಅವರು ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ಕೂಡಾ ಆಗಿದ್ದಾರೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಚುನಾವಣೆ ಬಾಕಿ ಉಳಿದಿದ್ದು, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಎಲ್ಲ ರೀತಿಯ ಕಸರತ್ತು ನಡೆಸುತ್ತಿದೆ. 2023ರ ವಿಧಾನಸಭಾ ಚುನಾವಣೆಗೆ ಈ ವರ್ಷಾಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

Join Whatsapp