ಕೋವಿಡ್ ಮಾರ್ಗಸೂಚಿ ಪಾಲಿಸದೇ ಅಂತ್ಯಸಂಸ್ಕಾರ ನಡೆಸಿದ 21 ಮಂದಿ ಸಾವು!

Prasthutha|

ಜೈಪುರ: ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯೊಬ್ಬನ ಅಂತ್ಯಸಂಸ್ಕಾರವನ್ನು ಕೋವಿಡ್ ಮಾರ್ಗಸೂಚಿ ಪಾಲಿಸದೇ ಅಂತ್ಯಸಂಸ್ಕಾರ ಮಾಡಿದ ಕೆಲವೇ ದಿನಗಳಲ್ಲಿ 21 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯ ಖೀರ್ವಾ ಗ್ರಾಮದಲ್ಲಿ ನಡೆದಿದೆ.

- Advertisement -

ಏ. 21ರಂದು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಖೀರ್ವಾ ಗ್ರಾಮಕ್ಕೆ ತರಲಾಗಿತ್ತು. ಈ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸದೇ ಅಂತ್ಯಸಂಸ್ಕಾರ ನಡೆಸಲಾಗಿದ್ದು, ಈ ವೇಳೆ ಸುಮಾರು 150 ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತ್ಯ ಸಂಸ್ಕಾರ ನಡೆಸುವ ಸಂದರ್ಭದಲ್ಲಿ ಶವವನ್ನು ಪ್ಲಾಸ್ಟಿಕ್ ಚೀಲದಿಂದ ಹೊರತೆಗೆಯಲಾಗಿದ್ದು, ಈ ವೇಳೆ ಹಲವರು ಶವವನ್ನು ಸ್ಪರ್ಷಿಸಿದ್ದಾರೆ ಎನ್ನಲಾಗಿದೆ.

- Advertisement -

“ಮೃತಪಟ್ವವರ 147 ಕುಟುಂಬಗಳ ಎಲ್ಲ ಸದಸ್ಯರ ಗಂಟಲು ಮಾದರಿಯನ್ನು ಪರೀಕ್ಷೆಗಾಗಿ ತೆಗೆದುಕೊಳ್ಳಲಾಗಿದೆ. ಕೋವಿಡ್ ಸಮುದಾಯದ ನೆಲೆಯಲ್ಲಿ ಹಬ್ಬುತ್ತಿದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತಿದೆ’ ಎಂದು ಲಕ್ಷ್ಮಣಘಡದ ಉಪ ವಿಭಾಗೀಯ ಅಧಿಕಾರಿ ಕುಲರಾಜ್ ಮೀನಾ ತಿಳಿಸಿದ್ದಾರೆ. ಗ್ರಾಮಸ್ಥರಿಗೆ ಸಮಸ್ಯೆಯ ತೀವ್ರತೆ ವಿವರಿಸಲಾಗಿದ್ದು, ಇಡೀ ಗ್ರಾಮವನ್ನು ಸ್ಯಾನಿಟೈಸೇಷನ್ ಮಾಡಲಾಗಿದೆ.

Join Whatsapp