ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ: 21 ಮಂದಿಗೆ ಗಾಯ

Prasthutha|

ಬೇತುಲ್: ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಬಸ್ಸು ಪಲ್ಟಿಯಾಗಿ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿರುವ ಘಟನೆ ಇಂದು (ಏ.20) ಮುಂಜಾನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಅಧಿಕಾರಿಗಳು ಚುನಾವಣಾ ಕರ್ತವ್ಯ ಮುಗಿಸಿ ರಾಜ್ ಗಢಕ್ಕೆ ಹಿಂತಿರುಗುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಈ ಅಪಘಾತ ನಡೆದಿದೆ.


ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಶಾಲಿನಿ ಪರಸ್ತೆ ತಿಳಿಸಿದ್ದಾರೆ. ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು (ಹೋಮ್ ಗಾರ್ಡ್) ಸೇರಿದಂತೆ ಒಟ್ಟು 40 ಜನ ಗಾಯಗೊಂಡಿದ್ದಾರೆ.

Join Whatsapp