ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ ಸರ್ಕಾರದಿಂದ 131 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 81 ಕೋಟಿ ರೂ. ಒಟ್ಟು 212 ಕೋಟಿ ರೂ. ಅನುದಾನ ಬಿಡುಗಡೆ ಆಗಿದೆ.
ಒಟ್ಟಾರೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ- ರಾಜ್ಯ ಸರ್ಕಾರದಿಂದ 212 ಕೋಟಿ ಅನುದಾನ ಸಿಕ್ಕಂತಾಗಿದೆ.
2002-03ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ಆರಂಭಿಸಿತು. ಶಾಲಾ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರವನ್ನು ಒದಗಿಸುವ ದೃಷ್ಟಿಯಿಂದ ಮೊಟ್ಟೆ, ಹಾಲು ಕೂಡ ನೀಡುತ್ತಿದೆ.
ಬಿಸಿಯೂಟ ಯೋಜನೆಗೆ ಸರ್ಕಾರದಿಂದ ಹಣ ಬಿಡುಗಡೆ ಆಗಿಲ್ಲ ಎಂದು ಶಿಕ್ಷಕರು ಇತ್ತೀಚೆಗೆ ಸರ್ಕಾರಕ್ಕೆ ಅಹವಾಲು ಸಲ್ಲಿಸಿದ್ದರು.