Home ಜಾಲತಾಣದಿಂದ ಬಿಹಾರ: ನಕಲಿ ಮದ್ಯ ಸೇವಿಸಿ 22 ಮಂದಿ ಮೃತ್ಯು

ಬಿಹಾರ: ನಕಲಿ ಮದ್ಯ ಸೇವಿಸಿ 22 ಮಂದಿ ಮೃತ್ಯು

ಪಾಟ್ನಾ: ನಕಲಿ ಮದ್ಯ ಸೇವಿಸಿ 22 ಮಂದಿ ಮೃತಪಟ್ಟಿರುವ ದಾರುಣ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ.

ಇನ್ನೂ ಅನೇಕ ಮಂದಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಪ್ರಿಲ್ 2016ರಲ್ಲಿ ಮುಖ್ಯಮಮತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಸೇವನೆಯ ಮೇಲೆ ಸಂಪೂರ್ಣ ನಿಷೇಧ ಹೇರಿತ್ತು.

ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಕಾಳಸಂತೆಯಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು, ಸ್ಥಳೀಯವಾಗಿ ತಯಾರಿಸಿದ ಮದ್ಯ ಸೇವಿಸಿ ಸಾವುಗಳು ಸಂಭವಿಸುತ್ತಲೇ ಇವೆ ಎಂದು ಹೇಳಲಾಗುತ್ತಿದೆ.

Join Whatsapp
Exit mobile version