ರಾಜ್ಯದಲ್ಲಿ 2,300 ಕೋಟಿ ರೂ. ಹೂಡಿಕೆಗೆ ಸಹಿ ಹಾಕಿದ ಟಾಟಾ ಸಮೂಹ

Prasthutha|

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆಯಿತು.

- Advertisement -

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ನೇತೃತ್ವದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್‌ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಸಿಎಂ ಸಿದ್ದರಾಮಯ್ಯ ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಇಡೀ ಭಾರತದಲ್ಲೇ ಇದು ಮೊಟ್ಟಮೊದಲ ಯೋಜನೆಯಾಗಿದೆ ಎಂದು ಸಿಎಂ X ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.



Join Whatsapp