ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ: ಒಂದು ದಿನದಲ್ಲಿ 12 ಶಿಶುಗಳು ಸೇರಿ 24 ಮಂದಿ ಮೃತ್ಯು

Prasthutha|

ಮುಂಬೈ: ಒಂದು ದಿನದಲ್ಲಿ 12 ನವಜಾತ ಶಿಶುಗಳು, 12 ವಯಸ್ಕರು ಸೇರಿ 24 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾದೆಂಡ್‌ ನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

- Advertisement -

ಹಾವು ಕಡಿತ ಸೇರಿದಂತೆ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಲ್ಲಿ 24 ಗಂಟೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ.

ಈ ಪೈಕಿ 6 ಗಂಡು ಹಾಗೂ 6 ಹೆಣ್ಣು ಶಿಶುಗಳು ಸೇರಿ 12 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ನಾಂದೇಡ್‌ ನ ಸರ್ಕಾರಿ ಆಸ್ಪತ್ರೆಯ ಡೀನ್ ಶಂಕರರಾವ್ ಚವ್ಹಾಣ ಹೇಳಿದ್ದಾರೆ.

- Advertisement -

ಈ ಘಟನೆಗೆ ಔಷಧಿ ಮತ್ತು ಆಸ್ಪತ್ರೆ ಸಿಬ್ಬಂದಿ ಕೊರತೆಯೇ ಕಾರಣ ಎಂದು ಹಲವು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮೃತಪಟ್ಟವರ ಸಂಖ್ಯೆ 31 ಕ್ಕೇರಿದೆ ಎಂದು NDTV ವರದಿ ಮಾಡಿದೆ.

Join Whatsapp