ಗೋಮಾಂಸ ಸೇವನೆ| ಬುಡಕಟ್ಟು ಜನಾಂಗದ 24 ಯುವಕರಿಗೆ ಸಾಮಾಜಿಕ ಬಹಿಷ್ಕಾರ!

Prasthutha: December 11, 2021

ತಿರುವನಂತಪುರ: ಗೋಮಾಂಸ ಸೇವಿಸಿದ 24 ಬುಡಕಟ್ಟು ಜನಾಂಗದ ಯವಕರಿಗೆ ಸಾಮಾಜಿಕ ಬಹಿಷ್ಕಾರ ಹೇರಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ.

ಗೋಮಾಂಸ ಸೇವನೆ ತಮ್ಮ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಈ ಮೂಲಕ ಶತಮಾನದ ತಮ್ಮ ಪದ್ಧತಿ, ಸಂಪ್ರದಾಯಗಳನ್ನು ಉಲ್ಲಂಘಿಸಿದ್ದಾರೆ ಎಂದು ಬುಡಕಟ್ಟು ಜನಾಂಗದ ಪುರುಷರಿಗೆ ಆ ಜನಾಂಗದ ಉರುಕ್ಕೂಟಮ್‌ (ಬುಡಕಟ್ಟು ಜನಾಂಗದ ಪರಿಷತ್ತು) ಸಾಮಾಜಿಕ ಬಹಿಷ್ಕಾರ ಹೇರಿದೆ.


ಬಹಿಷ್ಕಾರಗೊಂಡ ಪುರುಷರು ಅರಣ್ಯದ ನಿರ್ಜನ ಪ್ರದೇಶಕ್ಕೆ ತೆರಳಬೇಕು. ಅವರ ಪತ್ನಿ, ಸಂಬಂಧಿಗಳು, ಮಕ್ಕಳು, ತಂದೆ–ತಾಯಿ ಸೇರಿ ಯಾರೂ ಅವರನ್ನು ಸಂ‍ಪರ್ಕಿಸಬಾರದು ಎಂದು ಉರುಕ್ಕೂಟಮ್ ಆದೇಶಿಸಿದೆ.


ಈ ಕುರಿತು ಯಾವುದೇ ದೂರು ಬಂದಿಲ್ಲ. ಆದರೆ ವಿವಿಧ ಕಡೆಗಳಿಂದ ದೊರೆತ ಮಾಹಿತಿಯನ್ನು ಆಧರಿಸಿ ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!